ಹೊಸನಗರ ತಾಲ್ಲೂಕಿನ ಬೈಸೆ ಗ್ರಾಮದಲ್ಲಿ ದುರ್ಘಟನೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಗರ ಸಮೀಪದ ಬೈಸೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು ಬೆಳಿಗ್ಗೆ ದುರ್ಘಟನೆ ಸಂಭವಿಸಿದೆ. ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತ ಯುವಕನನ್ನು 28 ವರ್ಷದ ರಾಕೇಶ್ ಜೋಗಿ ಎಂದು ಗುರುತಿಸಲಾಗಿದೆ. ಅವರು ಶಾಲೆಯ ಮುಂಭಾಗದ ಜಗುಲಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಶಾಲೆಯ ಕಾರಿಡಾರ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡಿರುವುದನ್ನು ಸ್ಥಳೀಯರು ಗಮನಿಸಿದ ಬಳಿಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.









