ಜನಸಂದಣಿ ಮಧ್ಯೆ ಉಸಿರಾಟ ತೊಂದರೆ: ಕಾಗೋಡು ತಿಮ್ಮಪ್ಪ ಅಸ್ವಸ್ಥ

ಉಸಿರಾಟದ ತೊಂದರೆ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಅವರು ಅಚಾನಕ್ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಸಾಗರದ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಪ ವಿಭಾಗೀಯ ಆಸ್ಪತ್ರೆಯ ವೈದ್ಯರಾದ ವಿಕ್ರಂ ಅವರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ದೇವಸ್ಥಾನದಲ್ಲಿ ಉಂಟಾಗಿದ್ದ ಭಾರಿ ಜನಸಂದಣಿಯಿಂದ ಉಸಿರಾಟ ಸಮಸ್ಯೆ ಉಂಟಾಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

Leave a Comment